ಹರ್ಷ ಮನೆಗೆ ಗಣ್ಯರ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ
ಶಿವಮೊಗ್ಗ,ಫೆ.22- ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಡಾ.ಸಂತೋಷ ಭಾರತಿ ಶ್ರೀಪಾದ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಗಣ್ಯರು ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರ ಇಂದು ಯುವಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂದುತ್ವದ ಆಧಾರದ ಮೇಲೆ ಬಂದಿರುವ ಸರ್ಕಾರ ಹಿಂದೂ ಯುವಕರ ಮೇಲೆ ದಾಳಿ ನಡೆಯುತ್ತಿದ್ದರೂ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರಕ್ಷಣೆಯನ್ನು […]