ಮುರುಘಾ ಶ್ರೀಗಳ ಪದಚ್ಯುತಿಗೆ ಹೆಚ್ಚಿದ ಒತ್ತಡ..

ಬೆಂಗಳೂರು,ಅ.15- ಪೋಕ್ಸೋ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘ ರಾಜೇಂದ್ರ ಶರಣರನ್ನು ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿ ಪರ್ಯಾಯ ಪೀಠಾಧ್ಯಕ್ಷರ ನೇಮಕಕ್ಕೆ ತಯಾರಿಗಳು ನಡೆಯುತ್ತಿವೆ. ಮುರುಘಾ ಶ್ರೀಗಳ ವಿರುದ್ಧ ದಿನಕ್ಕೊಂದು ನಂಬಲು ಅಸಾಧ್ಯವಾದ ಲೈಂಗಿಕ ಪ್ರಕರಣಗಳು ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಪೀಠದಿಂದ ಅವರನ್ನು ವಜಾಗೊಳಿಸಿ, ಹೊಸಬರನ್ನು ಪೀಠಾಧ್ಯಕ್ಷರನ್ನಾಗಿ ನೇಮಿಸಲು ಮಠದ ಹಾಗೂ ಸಾಮಾಜಿಕ ಒತ್ತಡ ಹೆಚ್ಚಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಚಿತ್ರದುರ್ಗ ಮುರುಘಾ ಮಠದ […]