ನಾಲಿಗೆ ಹರಿ ಬಿಡುವ ಮುನ್ನ ಹುಷಾರ್ : ಯತ್ನಾಳ್‍ಗೆ ನಿರಾಣಿ ಎಚ್ಚರಿಕೆ

ಬೆಂಗಳೂರು, ಜ.7- ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಸಾವಿರ ಬಾರಿ ಯೋಚಿಸಿ ಟೀಕೆ ಮಾಡಿದರೆ ನಿಮಗೂ ಒಳಿತು, ನನಗೂ ಒಳಿತು. ಇನ್ನು ಮುಂದೆ ನಾಲಿಗೆ ಹರಿಬಿಟ್ಟರೆ ಅದೇ ದಾಟಿಯಲ್ಲಿ ನಾನು ಕೂಡ ಉತ್ತರ ಕೊಡುತ್ತೇನೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮಿಗಳ ನಾಡಿನಲ್ಲಿ ನಾವಿದ್ದೇವೆ ಎಂಬ ಕಾರಣಕ್ಕೆ ಇದುವರೆಗೂ ನಾನು ಎಷ್ಟೇ ಟೀಕೆಗಳನ್ನು […]

ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆಯಾಚಿಸಲಿ : ನಿರಾಣಿ

ಬೆಂಗಳೂರು,ಜ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತು ಅತ್ಯಂತ ಕೀಳುಮಟ್ಟದಲ್ಲಿ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಾಂವಿ ಧಾನಿಕ ಹುದ್ದೆ. ಅದಕ್ಕೆ ಗೌರವ ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಅತ್ಯಂತ ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರಿಂದ ಇಂತಹ ಪದವನ್ನು ನಿರೀಕ್ಷೆ ಮಾಡಿರ ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ವಿವಿಧ […]

ಬೆಳಗಾವಿಯಲ್ಲಿ ಗೋಲ್ಡ್ ಕ್ಲಾಸ್ ಕೈಗಾರಿಕಾ ಅಭಿವೃದ್ಧಿ ಪ್ರದೇಶ ಸ್ಥಾಪನೆ

ಬೆಳಗಾವಿ ,ಡಿ.23-ಗಡಿ ಭಾಗಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗ ಕೊಡುವ ಸದುದ್ದೇಶದಿಂದ ಬೆಳಗಾವಿಯಲ್ಲಿ ಗೋಲ್ಡ್ ಕ್ಲಾಸ್ ಕೈಗಾರಿಕಾ ಅಭಿವೃದ್ದಿ ಪ್ರದೇಶವನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಯಲ್ಲಿ ಶಾಸಕ ಅಭಯ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗಡಿ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಗಡಿ ಜಿಲ್ಲೆಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕೆಂಬುದು ಮೊದಲ ಉದ್ದೇಶವಾಗಿದೆ. ಇದರ ಮೊದಲ […]

ಯತ್ನಾಳ್‍ಗೆ ಟಾಂಗ್ ಕೊಟ್ಟ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಡಿ.20- ತಮ್ಮ ಜೀವವವನ್ನೇ ತ್ಯಾಗ ಮಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಚನನಂದ ಶ್ರೀಗಳೇ ಇರಲಿ ಅಥವಾ ಯಾರೇ ಇರಲಿ ಸಮಾಜ ಸುಧಾರಣೆಗೆ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಬೇಕಾದ ಅಗತ್ಯವಿಲ್ಲ. ಇದು ನಮ್ಮ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಹೇಳಿದರು. ಬಸನಗೌಡ […]

ಕೈಗಾರಿಕೆಗಳಿಗೆ ಉತ್ತೇಜನ : 1747.37 ಕೋಟಿಯ 35 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು ಅ.22- ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಗೆ ಮತ್ತಷ್ಟು ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು 1747.37 ಕೋಟಿ ಬಂಡವಾಳ ಹೂಡಿಕೆಯ 35 ಯೋಜನೆಗಳಿಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ನಡೆದ 135ನೇ ರಾಜ್ಯ ಮಟ್ಟದ ಏಕಗಾವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಬಂಡವಾಳ ಹೂಡಿಕೆಯ ಯೋಜನೆಗೆ ಅನುಮೋದನೆ ನೀಡಲಾಗಿದೆ. ಒಟ್ಟು 35 ಬೃಹತ್ ಮತ್ತು ಮಧ್ಯಮ ಯೋಜನೆಗಳಿಂದ 1747.47 ಕೋಟಿ […]

ಕೈಗಾರಿಕಾ ಸುಧಾರಣೆಗೆ ಶೆಟ್ಟರ್ ಸಲಹೆ ಪಡೆಯುವೆ : ಸಚಿವ ನಿರಾಣಿ

ಬೆಂಗಳೂರು,ಅ.8- ಪಕ್ಷದ ಹಿರಿಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರ ಸಲಹೆ ಪಡೆದು ಕೈಗಾರಿಗಾ ವಲಯದಲ್ಲಿ ಸುಧಾರಣೆ ತರಲು ತಾವು ಬದ್ದರಾಗಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಕರ್ನಾಟಕ ಈಗಲೂ ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದೆ. ಜಗದೀಶ್ ಶೆಟ್ಟರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ತಮಗೆ ತಿಳಿದಿಲ್ಲ. ಆದರೂ ಅವರ ಹೇಳಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ ಎಂದು ನಿರಾಣಿಯವರು ತಿಳಿಸಿದ್ದಾರೆ. ಕಳೆದ ನಾಲ್ಕು ತ್ರೈಮಾಸಿಕ ಅವಧಿಯಲ್ಲಿ ವಿದೇಶಿ […]

ಬೃಹತ್, ಮಧ್ಯಮ ಕೈಗಾರಿಕೆಗಳ ನೆರವಿಗೆ ಸರ್ಕಾರ ಬದ್ಧ : ನಿರಾಣಿ

ಬೆಂಗಳೂರು, ಸೆ.20-ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ 15 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ವಿವಿಧ ಕಾರಣಗಳಿಗೆ ಮುಚ್ಚಲ್ಪಟ್ಟಿವೆ. ಇದರಿಂದ 2086 ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರದ ವೇಳೆಯಲ್ಲಿ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕೆಗಳು ಕಚ್ಚಾ ಮಾಲಿನ ಕೊರತೆ, ಹಣಕಾಸಿನ ತೊಂದರೆ, ಕಾರ್ಮಿಕರ ಸಮಸ್ಯೆಗಳನ್ನು ಎದರಿಸುತ್ತಿದ್ದರೆ, ಅಂತಹ ಕೈಗಾರಿಕೆಗಳು ಬಯಸಿದ್ದಲ್ಲಿ ಸರ್ಕಾರ ನೆರವು ನೀಡಲು ಸಿದ್ಧವಿದೆ ಎಂದು ಹೇಳಿದರು. ಇದನ್ನೂ […]