ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರೆಸ್ಟ್

ಚಿತ್ರದುರ್ಗ,ನ.10- ಮುರುಘಾಮಠದಲ್ಲಿ ಫೋಟೋಗಳ ಕಳವು ಪ್ರಕರಣ ಸಂಬಂಧ ಮಾಜಿ ಶಾಸಕ ಹಾಗೂ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಕಳೆದ ಅ.6ರಂದು ರಾಜ್ಯಾಗಣದ ಗೋಡೆ ಮೇಲಿದ್ದ 47 ಫೋಟೋ ಕಳ್ಳತನ ಆಗಿವೆ ಎಂದು ಮುರುಘಾ ಮಠದ ಆಡಳಿತದ ಉಸ್ತುವಾರಿ ವಹಿಸಿರುವ ವಸ್ತ್ರಮಠದ್ ಅವರು ಗ್ರಾಮಾಂತರ ಫೋಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ.7ರಂದು ಪ್ರಕರಣದ ಇಬ್ಬರು ಅರೋಪಿಗಳಾದ ಹೊಸಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮೋಹನ […]
ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ,ಅ.21-ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ನ.3ರವರೆಗೆ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನದ ಅವ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಜಿಲ್ಲಾ 2ನೇ ಅಪರ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ನ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುರುಘಾ ಶ್ರೀ, 2ನೇ ಆರೋಪಿ ವಾರ್ಡನ್ ರಶ್ಮಿ ಹಾಗೂ ಇತರ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ […]