ಮುಜರಾಯಿ ದೇವಸ್ಥಾನಗಳ ಸ್ವಚ್ಛ ಮಂದಿರ ಅಭಿಯಾನ

ಬೆಂಗಳೂರು,ಫೆ.4- ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ. ಮುಜರಾಯಿ, ಹಜ್ ಮತ್ತು ವಕ್ ಸಚಿವರಾದ ಶಶಿಕಲಾ ಅ ಜೊಲ್ಲೇ ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ […]