ನನ್ನ ಪಾಲಿಸಿ ನನ್ನ ಕೈಯಲ್ಲಿ- ಬೆಳೆವಿಮೆ ಪಾಲಿಸಿ ವಿತರಣೆ ಅಭಿಯಾನ

ಬೆಂಗಳೂರು,ಫೆ.26-ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನಗನು ರೈತರ ಮನೆ ಬಾಗಿಲಿಗೆ ತಲುಪಿಸಲು , ನನ್ನ ಪಾಲಿಸಿ ನನ್ನ ಕೈಯಲ್ಲಿ ಎಂಬ ಬೆಳೆವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದ ಜಿಕೆವಿಕೆಯ ಬಿ.ಹೆಚ್.ಎಸ್ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪಗಳಿಂದ ಬೆಳೆಗಳಿಗೆ ವಿಮಾ ಭದ್ರತಾ ಕವಚ ಒದಗಿಸುವುದು ನಮ್ಮ ಸಂಕಲ್ಪವಾಗಿದೆ. ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರುವ […]