ದಸರಾ ಪ್ರವಾಸಿಗರಿಗೆ ಏಕೀಕೃತ ಟಿಕೆಟ್ ವ್ಯವಸ್ಥೆ

ಮೈಸೂರು,ಸೆ.19- ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್ ಎಸ್ ಬೃಂದಾವನಕ್ಕೆ ತೆರಳಬಹುದು.ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ ಟಿಕೆಟ್‍ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ. ಒಂದೇ ಟಿಕೆಟ್‍ನಲ್ಲಿ 5 ಸ್ಥಳಗಳಲ್ಲಿ ಪ್ರವಾಸ ಮಾಡಬಹುದು. ಇದನ್ನೂ […]