ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕರಿಗೆ ಕಟೀಲ್ ಖಡಕ್ ವಾರ್ನಿಂಗ್

ಬೆಂಗಳೂರು,ಜ.31-ಪಕ್ಷದ ಶಿಸ್ತು ಉಲ್ಲಂಘಿ ಹಾದಿಬೀದಿಯಲ್ಲಿ ರಂಪಾಟ ಮಾಡುವುದು ಇಲ್ಲವೇ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿದರೆ ಶಿಸ್ತುಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ , ಮೈಸೂರು ಸಂಸದ ಹಾಗೂ ಶಾಸಕರಿಗೆ ಎಚ್ಚರಿಸಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ ಹಾಗೂ ಎಸ್.ಎ.ರಾಮದಾಸ್ ಅವರಿಗೆ ದೂರವಾಣಿ ಕರೆ ಮಾಡಿರುವ ಕಟೀಲ್ ಅವರು, ತಕ್ಷಣವೇ ನಿಮ್ಮ ವಾಕ್ಸಮರಕ್ಕೆ ಕಡಿವಾಣ ಹಾಕಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಪರಸ್ಪರ ಒಬ್ಬರಿಗೊಬ್ಬರು […]