ದಸರಾ ಮಹೋತ್ಸವ: ಸೆ.20ರಂದು ಸಿಂಹಾಸನ ಜೋಡಿಸುವ ಕಾರ್ಯ ಆರಂಭ

ಮೈಸೂರು, ಸೆ.13- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳ ದಾದ ಖಾಸಗಿ ದರ್ಬಾರ್ಗೆ ರತ್ನ ಖಚಿತ ಸಿಂಹಾಸನವನ್ನು ಜೋಡಿಸುವ ಕಾರ್ಯ ಸೆ.20ರಂದು ಆರಂಭವಾಗಲಿದೆ. ನವರಾತ್ರಿ ವೇಳೆ ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್‍ನ ಸಿಂಹಾಸನಾರೋಹಣಕ್ಕೆ ಬಳಸುವ ರತ್ನ ಖಚಿತ ಸ್ವರ್ಣ ಸಿಂಹಾಸನವನ್ನು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ರಾಜವಂಶಸ್ಥರ ಸಮ್ಮುಖದಲ್ಲಿ ಅರಮನೆಯ ನೆಲಮಾಳಿಗೆಯಲ್ಲಿನ ಭದ್ರತಾ ಕೊಠಡಿಯಿಂದ ಹೊರ ತೆರೆಯಲಾಗುತ್ತದೆ. ಅಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 1ಗಂಟೆವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ. ಭದ್ರತಾ ಕೊಠಡಿಯಿಂದ […]