ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಮೈಸೂರು,ಸೆ.26- ಸಾಂಸ್ಕøತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು. ಬಳಿಕ ನಾಡಿನ ಹೆಮ್ಮೆಯ […]

ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ

ಮೈಸೂರು, ಸೆ.4- ಈ ಬಾರಿ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸಾಧಾರಣ ದಸರಾ ಉತ್ಸವ ಆಚರಿಸಲಾಗಿತ್ತು. ಹೀಗಾಗಿ ಈ ಬಾರಿ ಅದ್ಧೂರಿ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು. ಅದ್ಧೂರಿ ದಸರಾ ಉತ್ಸವ ಆಚರಣೆ ಕುರಿತಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಉತ್ಸವದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು. ನಗರದ ಜಿಪಂ ಆವರಣದಲ್ಲಿರುವ ಅಬ್ದುಲ್ ನಜೀರ್‍ಸಾಬ್ […]