ಮೋದಿ ನಾಮಬಲವಿಲ್ಲದೆ ಬಿಜೆಪಿಯವರ ಯೋಗ್ಯತೆಗೆ ಠೇವಣಿ ಕೂಡ ಸಿಗಲ್ಲ : ಜೆಡಿಎಸ್

ಬೆಂಗಳೂರು,ನ.13-ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ಶಿಷ್ಟಾಚಾರದ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ ಎಂದು ಜೆಡಿಎಸ್ ಮತ್ತೆ ವಾಗ್ದಾಳಿ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಆಪರೇಷನ್ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು […]

ಕೆಂಪೇಗೌಡರ ಚಿಂತನೆಯಂತೆಯೇ ಬೆಂಗಳೂರು ನಗರ ನಿರ್ಮಾಣ : ಸಿಎಂ

ಬೆಂಗಳೂರು,ನ.11-ನಾಡುಪ್ರಭು ಕೆಂಪೇಗೌಡರ ಆದರ್ಶ, ವಿಚಾರಧಾರೆ, ಚಿಂತನೆಯಂತೆಯೇ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಾಮಂತರಾಗಿದ್ದ ನಾಡಪ್ರಭು ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯ ಸುವರ್ಣ ಯುಗದ ಕಲ್ಪನೆಯಂತೆಯೇ ಬೆಂಗಳೂರು ನಗರ ನಿರ್ಮಾಣ ಮಾಡಿದ್ದರು. ಅವರ ದೂರದೃಷ್ಟಿಯಯಿಂದ ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸಿ ಬೆಂಗಳೂರು ಕಟ್ಟಿದ್ದರು. ಇಂದು ಬೆಂಗಳೂರು ವಿಶ್ವಮಾನ್ಯತೆ ಪಡೆದಿದೆ. ಭವ್ಯ ರಾಜ್ಯ ನಿರ್ಮಾಣದ ಅವರ ಕನಸನ್ನು […]