ಜನತಾ ಪರಿವಾರದ ನಾಯಕ ಸಿಂ.ಲಿಂ.ನಾಗರಾಜು ವಿಧಿವಶ

ಬೆಂಗಳೂರು, ಡಿ.3- ಜನತಾ ಪರಿವಾರದ ಹಿರಿಯ ನಾಯಕ, ಕನ್ನಡಪರ ಹಾಗೂ ರೈತಪರ ಹೋರಾಟಗಾರರಾದ ಸಿಂ.ಲಿಂ.ನಾಗರಾಜು ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷವಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಹೃದಯಾಘಾ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಚನ್ನಪಟ್ಟಣದ ಗಾಂಧಿ ಭವನದಲ್ಲಿ ಮಧ್ಯಾಹ್ನದವರೆಗೂ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಚನ್ನಪಟ್ಟಣದಲ್ಲಿ ಅಜಾತಶತ್ರುವೆಂದೇ ಚಿರಪರಿಚಿತರಾಗಿದ್ದ ಅವರು, ಕಳೆದ 1967ರಿಂದಲ್ಲೂ ಸಕ್ರೀಯ ರಾಜಕಾರಣದಲ್ಲಿದ್ದರು. ಕಳೆದ […]