ಶಾಲಾಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ : ಸಚಿವ ನಾಗೇಶ್

ಬೆಂಗಳೂರು,ಅ.13- ಹಿಜಾಬ್ ಕುರಿತಂತೆ ಸುಪ್ರೀಂಕೋರ್ಟ್‍ನ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿರುವ ಹಿನ್ನಲೆ ಶಾಲಾಕಾಲೇಜುಗಳಲ್ಲಿ ಸಮವಸ್ತ್ರ ಹೊರತುಪಡಿಸಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸುಪ್ರೀಂಕೋರ್ಟ್‍ನ ದ್ವಿಸದಸ್ಯ ಪೀಠದ ಇಬ್ಬರು ನ್ಯಾಯಮೂರ್ತಿಗಳು ಭಿನ್ನವಾದ ತೀರ್ಪು ನೀಡಿದ್ದಾರೆ. ಸುಪ್ರೀಂಕೋರ್ಟ್‍ನ ಅಂತಿಮ ತೀರ್ಪು ಬರುವವರೆಗೂ ಹೈಕೋರ್ಟ್ ನೀಡಿರುವ ಆದೇಶ ಮುಂದುವರೆಯುತ್ತದೆ ಎಂದು ಸ್ಪಷ್ಪಪಡಿಸಿದರು. ಶಾಲಾಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ತರಗತಿಗಳಿಗೆ ಬರಬೇಕು. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರುವಂತಿಲ್ಲ. ಕರ್ನಾಟಕ […]
ಶಿಕ್ಷಕರ ನೇಮಕಾತಿಗಾಗಿ ವರ್ಷಕ್ಕೆ 2 ಬಾರಿ ಟಿಇಟಿ ಪರೀಕ್ಷೆ : ಸಚಿವ ನಾಗೇಶ್
ಬೆಂಗಳೂರು,ಆ.8- ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಇದೇ ತಿಂಗಳ ಅಂತ್ಯದೊಳಗೆ ಪ್ರಕಟಿಸುವ ಗುರಿ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದು, ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳ […]