ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಜಿಟಿಡಿ ಆಗ್ರಹ

ಬೆಂಗಳೂರು, ಆ.9- ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಶಾಸಕ ಜಿ.ಟಿ ದೇವೇಗೌಡರು ಆಗ್ರಹಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ದೇವೇಗೌಡರು, ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತವಾದ ಮೀಸಲಾತಿ ಕೊಡಲು ಸಾಧ್ಯವಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ, ಅನ್ಯಾಯಕ್ಕೆ ಒಳಗಾಗಿರುವ ಬಡತನ ರೇಖೆಯಲ್ಲಿರುವ […]