ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್‍ನಲ್ಲಿ ಲಾಬಿ..

ಬೆಂಗಳೂರು, ಜ.4- ತೆರವಾಗುತ್ತಿರುವ ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‍ನಲ್ಲಿ ಭಾರೀ ಲಾಬಿ ನಡೆದಿದ್ದು, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಮುಂಚೂಣಿಯಲ್ಲಿದ್ದಾರೆ. ಕಾಂಗ್ರೆಸ್‍ನಲ್ಲಿ ಲಿಂಗಾಯಿತ ಸಮುದಾಯದ ಎಸ್.ಆರ್.ಪಾಟೀಲ್ ವಿರೋಧ ಪಕ್ಷದ ನಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಅವಧಿ ನಾಳೆಗೆ ಮುಕ್ತಾಯಗೊಳ್ಳುತ್ತಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಅವರು ಸ್ರ್ಪಧಿಸಲು ಅವಕಾಶ ಸಿಕ್ಕಲ್ಲ. ಹೀಗಾಗಿ ಅವರ ಸದಸ್ಯತ್ವದ ಅವಯೂ ಕೂಡ ನಾಳೆಗೆ ಕೊನೆಗೊಳ್ಳುತ್ತಿದೆ. ತೆರೆವಾಗುತ್ತಿರುವ ನಾಯಕನ ಸ್ಥಾನಕ್ಕೆ ಹಲವಾರು ಮಂದಿ ಪ್ರಮುಖ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹಿಂದುಳಿದ ವರ್ಗಗಳ […]