ನಂದಿಬೆಟ್ಟ ರೋಪ್-ವೇ ನಿರ್ಮಾಣಕ್ಕೆ ಅನುಮೋದನೆ

ಚಿಕ್ಕಬಳ್ಳಾಪುರ, ಫೆ 19- ಜನಪ್ರಿಯ ಪ್ರವಾಸಿ ತಾಣ ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ತಾಣವಾಗಿ ಬೆಳೆಸುವ ಉದ್ದೇಶದೊಂದಿಗೆ ರೂಪಿಸಿರುವ ರೋಪ್-ವೇ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ನಂದಿ ಬೆಟ್ಟ ಕೆಲವೇ ವರ್ಷಗಳಲ್ಲಿ ಅತ್ಯಂತ ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿಯಾಗಲಿದೆ. ಇದು ಜಿಲ್ಲೆಯ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ನಂದಿ ಗಿರಿಧಾಮ ಆಕರ್ಷಣೀಯ ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರಿಗೆ ವಾರಾಂತ್ಯದಲ್ಲಿ ಭೇಟಿ ನೀಡಲು ಸೂಕ್ತ […]