ಬೆಳಗಾವಿಯಲ್ಲಿ ನಂದಿನಿ ಫುಡ್‍ಪಾರ್ಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ : ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು, ಜ.15- ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪನ್ನೀರ್ ಹಾಗೂ ಚೀಸ್ ಆಧಾರಿದ ಉತ್ಪನ್ನಗಳು ಮತ್ತು ಇತರೆ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದರು. ಕೆಎಂಎಫ್ 2020-21ನೆ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೆಗಾ ಫುಡ್‍ಪಾರ್ಕ್ ಮೂಲಕ ನೆರೆಯ ಗೋವಾ […]