36 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಗೆ ಗುಂಡೇಟು

ಬೆಂಗಳೂರು, ಜ.11- ಸುಮಾರು 36 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದಾಗ ಆತ್ಮರಕ್ಷಣೆಗಾಗಿ ಗಿರಿನಗರ ಠಾಣೆ ಸಬ್‍ಇನ್ಸ್‍ಪೆಕ್ಟರ್ ಹಾರಿಸಿದ ಗುಂಡು ರೌಡಿ ಕಾಲಿಗೆ ತಗುಲಿ ಸಿಕ್ಕಿಬಿದ್ದಿದ್ದಾನೆ. ನರಸಿಂಹ ಅಲಿಯಾಸ್ ನರಸಿಂಹರೆಡ್ಡಿ (32) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿ. ಗಿರಿನಗರ ಪೊಲೀಸ್ ಠಾಣೆಯ ರೌಡಿ ನರಸಿಂಹರೆಡ್ಡಿ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ, ಸರ ಅಪಹರಣ, ಮನೆಗಳ್ಳತನ ಅಪಹರಣ ಪ್ರಕರಣಗಳು ಸೇರಿದಂತೆ 36ಕ್ಕೂ ಹೆಚ್ಚು ಪ್ರಕರಣಗಳು ವಿವಿಧ […]