ರಾಷ್ಟ್ರೀಯ ನಾಯಕರನ್ನು ಕರೆತಂದು ಸಾಲು ಸಾಲು ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ

ಬೆಂಗಳೂರು,ನ.18- ಬರಲಿರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ , ಸಾಲು ಸಾಲು ಸಮಾವೇಶಗಳನ್ನು ನಡೆಸಿ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ಮುಂದಾಗಿದೆ. ಭಾನುವಾರ ಬಳ್ಳಾರಿಯಲ್ಲಿ ನಡೆಯಲಿರುವ ಎಸ್ಸಿ ಮೋರ್ಚಾದ ನವಶಕ್ತಿ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆ. ಡಿಸೆಂಬರ್‍ನಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಬಳಿ ರಾಷ್ಟ್ರೀಯ ಲಂಬಾಣಿ ಸಮಾವೇಶ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುವ ನಿರೀಕ್ಷೆ ಇದೆ. ಗುಜರಾತ್ ಮತ್ತು ಹಿಮಾಚಲಪ್ರದೇಶದ ವಿಧಾನಸಭೆ […]