ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶಕ್ಕೆ ಬಿಬಿಎಂಪಿ ನೀಡಿದ್ದ ಅನುಮತಿ ರದ್ದು

ಬೆಂಗಳೂರು,ಜ.13-ಕಾಂಗ್ರೆಸ್ ಪಾದಯಾತ್ರೆ ಬೆಂಗಳೂರಿಗೆ ಆಗಮಿಸಲು ಹಾಗೂ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ನೀಡಲಾಗಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಗೊಳಿಸಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿ ಕೂಡಲೆ ಯಾತ್ರೆ ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರದ ಆದೇಶದ ಮೇರೆಗೆ ಬಿಬಿಎಂಪಿ ಅಕಾರಿಗಳು ಪಾದಯಾತ್ರೆ ಬೆಂಗಳೂರು ಪ್ರವೇಶಿಸಲು ಹಾಗೂ ನ್ಯಾಶನಲ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರ್ಯಾಲಿಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದೆ. ಸರ್ಕಾರದ ಆದೇಶದಂತೆ ರ್ಯಾಲಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುತ್ತಿರುವುದಾಗಿ ಬಿಬಿಎಂಪಿ […]