25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ

ನವದೆಹಲಿ,ಫೆ.1-ದೇಶದಲ್ಲಿ ಸಂಪರ್ಕ ಕ್ರಾಂತಿಯನ್ನು ಸೃಷ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಪ್ರಸಕ್ತ ವರ್ಷದಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಸಂಸತ್‍ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು. ಇದಕ್ಕಾಗಿ ಅಗತ್ಯವಾದ ಅನುದಾನವನ್ನು ಸಾರಿಗೆ ಇಲಾಖೆಗೆ ಒದಗಿಸುವುದಾಗಿಯೂ ಪ್ರಕಟಿಸಿದರು. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ ಸಂಪರ್ಕ ಕ್ರಾಂತಿಯಾಗಲಿದ್ದು ಇದರಿಂದ ಕೈಗಾರಿಕೆಗಳ ಸ್ಥಾಪನೆ ಹಾಗೂ […]