ಮಾಧ್ಯಮಗಳು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸಲಿ : ಜೆ.ಸಿ.ಮಾಧುಸ್ವಾಮಿ

ಬೆಂಗಳೂರು,ನ.16-ಜಾತಿ, ಧರ್ಮ, ನೆಲ, ಜಲ ವಿಚಾರಗಳಲ್ಲಿ ತಿಕ್ಕಾಟ ತರುವಂತಹ ಕೆಲಸಗಳನ್ನು ಮಾಧ್ಯಮಗಳು ಮಾಡಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಇಂದಿಲ್ಲಿ ಕಿವಿಮಾತು ಹೇಳಿದರು. ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಐಕ್ಯತೆ, ಬದುಕು ಹಾಳಾಗುವಂತಹ ವರದಿಗಳನ್ನು ಪ್ರಸಾರ ಮಾಡಬಾರದು. ದೇಶದ ಅಭಿವೃದ್ಧಿಗೆ ಶಾಂತಿ -ಸುವ್ಯವಸ್ಥೆ ಪ್ರಮುಖ ಪಾತ್ರ ವಹಿಸಲಿದೆ. ದೇಶದ ಅಭಿವೃದ್ಧಿ […]