ಭಾರತಕ್ಕೆ ಅತ್ಯುತ್ತಮ ಯುಗ ಬರಲಿದೆ : ಪ್ರಧಾನಿ ಮೋದಿ

ನವದೆಹಲಿ, ಜ.18- ಭಾರತಕ್ಕೆ ಅತ್ಯುತ್ತಮ ಯುಗ ಬರಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ದೇಶದ ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿರುವ ರಾಷ್ಟ್ರೀಯ ಹಾಗೂ ರಾಜ್ಯ ಪದಾಧಿಕಾರಿಗಳು ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಅವರು ಈ ಕರೆ ನೀಡಿದ್ದಾರೆ. ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಲು ಮುಂದಾಗಬೇಕು ಎಂದರು. 2047ರ ವೇಳೆಗೆ ಭಾರತ ನಂ.1 ಆರ್ಥಿಕತೆಯ ರಾಷ್ಟ್ರವಾಗಲು ಈಗಾಗಲೇ ಅದರ ಕಡೆ […]