ಬೆಲೆ ಏರಿಕೆ ವಿರುದ್ಧ ಆ.5 ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ

ರಾಯ್ಪುರ,ಆ.3- ನಿರುದ್ಯೋಗ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆ.5ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಮತ್ತು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಪ್ರತಿಭಟನೆ ಮೂಲಕ ಪ್ರಧಾನಿ ಹೌಸ್ ಘೇರಾವ್ ಹಾಕಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಛತ್ತೀಶಗಢದಲ್ಲೂ ರಾಜ್ಯ ಕಾಂಗ್ರೆಸಿಗರು ಧರಣಿ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ರಾಯ್‍ಪುರದ […]