ನವೀನ್ ಮೃತದೇಹ ಪಡೆಯಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ : ಸಿಎಂ

ಬೆಂಗಳೂರು, ಮಾ.5- ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ಪಡೆಯುವ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತದೇಹವನ್ನು ಪಡೆಯುವ ಕುರಿತಂತೆ ನಿಖರ ಮಾಹಿತಿಯನ್ನು ಪಡೆಯಲಾಗುತ್ತಿದೆ. ಉಕ್ರೇನ್‍ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ ಎಂದರು. ಉಕ್ರೇನ್‍ನ ಖರಕಾಯ್, ಕೀವ್‍ನಲ್ಲಿ ಹೊರಬರಲಾರದ ಕಠಿಣ ಪರಿಸ್ಥಿತಿಯೂ ಇದೆ. ಅಲ್ಲಿ ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯ ನಿರತರಾಗಿದ್ದಾರೆ. ರಷ್ಯಾದ ದಾಳಿ ಕಡಿಮೆಯಾದ ಕೂಡಲೇ ಸಿಲುಕಿಕೊಂಡಿರುವವರ ಸಂಪರ್ಕ ಸಾಧಿಸಲಾಗುವುದೆಂಬ ಮಾಹಿತಿ ನೀಡಿದ್ದಾರೆ ಎಂದು […]