ಬಿಜೆಪಿ ಪರ ಪ್ರಚಾರ ಮಾಡಿದ ಕಾಂಗ್ರೆಸ್ ಮಾಜಿ ಶಾಸಕನ ಉಚ್ಚಾಟನೆ

ಲಕ್ನೋ,ಡಿ.2- ಉತ್ತರಪ್ರದೇಶದ ರಾಂಪುರ ಸದರ್ ವಿಧಾನಸಭಾಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ ಆರೋಪದ ಮೇಲೆ ಮಾಜಿ ಶಾಸಕ ನವಾಬ್ ಕಾಜಿಮ್ ಅಲಿ ಖಾನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉಪಚುನಾವಣೆಯಲ್ಲಿ ನವಾಬ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಮತ ಪ್ರಚಾರ ನಡೆಸುತ್ತಿರುವ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಿದ ನಂತರ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲು ತೀರ್ಮಾನಿಸಲಾಯಿತು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಅಶೋಕ್ ಸಿಂಗ್ ತಿಳಿಸಿದ್ದಾರೆ. ಯುಪಿ ಡಿಸಿಎಂಗಳಿಗೆ […]