ದೆಹಲಿ ಪಾಲಿಕೆ ಗದ್ದುಗೆಗೆ ಬಿಜೆಪಿ-ಆಪ್ ನಡುವೆ ಪ್ರಬಲ ಪೈಪೋಟಿ

ನವದೆಹಲಿ, ಡಿ.7- ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದ್ದು, ಅಧಿಕಾರ ಹಿಡಿಯಲು ಜಿದ್ದಾಜಿದ್ದಿನ ಸರ್ಧೆ ಕಂಡು ಬಂದಿತ್ತು. ದೇಶದ ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯಲ್ಲಿನ 250 ಸ್ಥಾನಗಳಿದ್ದು, ಅಧಿಕಾರ ಹಿಡಿಯಲು 126 ಸ್ಥಾನಗಳನ್ನು ಗೆಲ್ಲಬೇಕಿದೆ. ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಅಮ್ ಆದ್ಮಿ ಪಕ್ಷಗಳು ರೋಚಕ ಪೈಪೋಟಿಯಲ್ಲೇ ಮುಂದುವರೆದವು. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕಳೆದ […]