ನೀಟ್ ಪರೀಕ್ಷೆ ವಿಳಂಬ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು

ರಾಮನಗರ,ಫೆ.11- ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಸಹ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಕಾರಕ್ಕೆ ಸೂಚಿಸ ಲಾಗಿದೆ ಎಂದು ಹೇಳಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ […]