ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ : ಕಾಂಗ್ರೆಸ್ ಆರೋಪ

ಬೆಂಗಳೂರು,ನ.24- ಕಾವೇರಿಗೆ ಅಡ್ಡಲಾಗಿ ತಮಿಳುನಾಡು ಸರ್ಕಾರ ನಿರ್ಮಿಸುತ್ತಿರುವ ಅಣೆಕಟ್ಟು ಯೋಜನೆಗೆ ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸದೆ ಇರುವುದರಿಂದ ಮುಂದಿನ ದಿನಗಳಲ್ಲಿ ನೀರಾವರಿ ವಿಷಯದಲ್ಲಿ ಭಾರೀ ಅನ್ಯಾಯ ಅನುಭವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ವಕ್ತಾರರಾದ ಲಕ್ಷ್ಮಣ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಜಂಟಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಸಂಕಲ್ಪ ಯಾತ್ರೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಟೀಕಿಸುವುದರಲ್ಲೇ ಅವರ ಸಮಯ ವ್ಯರ್ಥವಾಗುತ್ತಿದೆ. ರಾಜ್ಯ ಶ್ರೇಯೋಭಿವೃದ್ಧಿಗಿಂತ ಅವರಿಗೆ ಪಕ್ಷದ ರಾಜಕಾರಣವೇ ಮುಖ್ಯವಾಗಿದೆ ಎಂದು ಆರೋಪಿಸಿದರು. ಹೊಗೆನಕಲ್ಲಿನಲ್ಲಿ ತಮಿಳುನಾಡು […]