ಸಮರ್ಥ ಭಾರತ ನಿರ್ಮಾಣವೇ ಎನ್‍ಇಪಿ ಗುರಿ: ಅಶ್ವತ್ಥನಾರಾಯಣ

ಬೆಂಗಳೂರು,ಜ.12- ವಿವೇಕಾನಂದರು ಆಸೆಪಟ್ಟಿದ್ದಂತಹ ಸಶಕ್ತ ಭಾರತವನ್ನು ಕಟ್ಟುವ ಮಹೋದ್ದೇಶದಿಂದಲೇ 34 ವರ್ಷಗಳ ನಂತರ ದೇಶದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೇ ಮೊದಲ ಸ್ಥಾನದಲ್ಲಿದ್ದು, ಯುವಜನರ ಸಬಲೀಕರಣವನ್ನು ಸಮರೋಪಾದಿಯಲ್ಲಿ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ¾ಸಮರ್ಥ ಭಾರತ¿ ಸಂಘಟನೆಯು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿಯಲ್ಲಿ ಮಾತನಾಡಿದ ಅವರು, ವಿವೇಕಾನಂದರು ಇಡೀ ಪ್ರಪಂಚಕ್ಕೆ ಭಾರತ […]