ನವಬೆಂಗಳೂರು ನಿರ್ಮಿಸಲು ಸರ್ಕಾರ ಚಿಂತನೆ

ಬೆಂಗಳೂರು,ಜ.5- ರಾಜಧಾನಿ ಬೆಂಗಳೂರಿನ ನಾಗರಿಕರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒಳಗೊಂಡ ನವಬೆಂಗಳೂರು ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಜಯನಗರದಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಒಡೆತನದ ಜಿ.ಎಂ.ಗ್ರೂಪ್ ಹಾಗೂ ಅದ್ವೈತ್ ಗ್ರೂಪ್‍ನಿಂದ ನೂತನವಾಗಿ ನಿರ್ಮಾಣವಾಗಲಿರುವ ಫೈವ್ ಬಿಸಿನೆಸ್ ಬೆ ವಾಣಿಜ್ಯ ಸಮುಚ್ಛಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸಿಲಿಕಾನ್ ವ್ಯಾಲಿ ಎಂದೇ ಬೆಂಗಳೂರಿನಲ್ಲಿ ನವಬೆಂಗಳೂರು ನಿರ್ಮಾಣಕ್ಕೆ ನೀಲನಕ್ಷೆಯನ್ನು ಸಿದ್ದಪಡಿಸಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಸಹ ಸರ್ಕಾರ ನೀಡಲಿದೆ ಎಂದು […]