ಹೊಸ ಇಂಜಿನಿಯರಿಂಗ್ ಕಾಲೇಜು ತೆರೆಯುವ ಪ್ರಸ್ತಾವನೆ ಇಲ್ಲ

ಬೆಂಗಳೂರು,ಫೆ.17- ಈಗಾಗಲೇ ಇರುವ ಕಾಲೇಜುಗಳಲ್ಲೇ ಪೂರ್ಣ ಪ್ರಮಾಣದ ಪ್ರವೇಶಾತಿ ಆಗದ ಕಾರಣ ರಾಜ್ಯದಲ್ಲಿ ಹೊಸದಾಗಿ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದರು. ಶಾಸಕ ಬೂಸನೂರು ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಅಸ್ಥಿತ್ವದಲ್ಲಿರುವ ಅನೇಕ ಇಂಜನಿಯರ್ ಕಾಲೇಜುಗಳಲ್ಲಿ ಶೇ.50ರಿಂದ 75ರಷ್ಟು ಸೀಟುಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಇರುವ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆ ಇರುವುದರಿಂದ ಹೊಸದಾಗಿ ಇಂನಿಯರಿಂಗ್ ಕಾಲೇಜು ತೆರೆಯುವ ಪ್ರಸ್ತಾವನೆ ಸರ್ಕಾರದ ಮುಂದೆ […]