ಹೊಸ ಪಡಿತರ ಚೀಟಿ ವಿತರಣೆ

ಬೆಂಗಳೂರು, ಫೆ.14- ಹೊಸ ಪಡಿತರ ಚೀಟಿಯನ್ನು ವಿತರಿಸುವ ಕಾರ್ಯ ಜಾರಿಯಲ್ಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಎಂ.ವಿ.ವೀರಭದ್ರಯ್ಯಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಸಚಿವರು, ಆದ್ಯತಾ ಪಡಿತರ ಚೀಟಿಯನ್ನು ಕೋರಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಕುಟುಂಬಗಳ ವಾಸಸ್ಥಳ ಪರಿಶೀಲನೆ ಕೈಗೊಂಡು ಹೊಸ ಆದ್ಯತಾ ಪಡಿತರ ಚೀಟಿ ನೀಡಲಾಗುತ್ತಿದೆ ಎಂದರು. ಮಧುಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಆದ್ಯತಾ ಪಡಿತರ ಚೀಟಿಗಾಗಿ 2524 ಅರ್ಜಿಗಳು ಸಲ್ಲಿಕೆಯಾಗಿದ್ದು, 1845 ಅರ್ಜಿಗಳು […]