ನೂತನ ತಾಲೂಕಾಗಿ ಹಾರೋಹಳ್ಳಿ ಉದ್ಘಾಟನೆ

ಹಾರೋಹಳ್ಳಿ, ಫೆ.21- ರಾಮನಗರ ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹಾರೋಹಳ್ಳಿ ತಾಲ್ಲೂಕಿನ ನೂತನ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನ ತಾಲ್ಲೂಕು ಒಟ್ಟು 11 ಗ್ರಾಮ ಪಂಚಾಯತಿಗಳನ್ನು ಒಳಗೊಂಡಿದ್ದು, 82 ಗ್ರಾಮಗಳಿವೆ. ಹೊಸ ತಾಲ್ಲೂಕಿನ ಜನಸಂಖ್ಯೆಯು 90 ಸಾವಿರ ಆಗಿದೆ ಎಂದು ತಿಳಿಸಿದರು.ತಾಲ್ಲೂಕು ಕಚೇರಿಗೆ ಬೇಕಾದ ಹುದ್ದೆಗಳನ್ನು ಬಿಜೆಪಿ ಸರಕಾರ ಸೃಜಿಸಿದ್ದು, ಎಲ್ಲ ಕಚೇರಿಗಳಿಗೂ ಜಾಗ ಒದಗಿಸಿದೆ. ಅಗತ್ಯವಿದ್ದರೆ ಕಚೇರಿಗಳ ಕಟ್ಟಡ ನಿರ್ಮಿಸಲು 30 ಗುಂಟೆ ಜಮೀನನ್ನು […]