ಹೊಸ ಮತದಾರರ ನೋಂದಣಿಗೆ ಡಿ.8 ರವರೆಗೆ ಅವಕಾಶ

ಬೆಂಗಳೂರು,ಡಿ.4- ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುತ್ತಿದೆ. ಪಟ್ಟಿಯಲ್ಲಿ ನೋಂದಣಿಯಾಗದ ಅರ್ಹ ವಿಕಲಚೇತನರು ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 8 ರವರೆಗೆ ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬಿ.ಆರ್.ಮಮತಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2022ರ ಕಾರ್ಯಕ್ರಮದಲ್ಲಿ […]