ಹೊಸ ವರ್ಷಾಚರಣೆ, ಪೊಲೀಸರು ಅಲರ್ಟ್

ಬೆಂಗಳೂರು, ಡಿ.26- ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವುದರಿಂದ, ನಗರ ಪೊಲೀಸರು ಬಹಳ ಎಚ್ಚರಿಕೆಯಂದಿರುವಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ತನಿಖಾ ಸಂಸ್ಥೆಗಳಿಂದ ಇದುವರೆಗೂ ತಮಗೆ ಯಾವುದೇ ಎಚ್ಚರಿಕೆ ಸಂದೇಶ ಬಂದಿಲ್ಲ. ಆದರೂ ನಗರದಲ್ಲಿ ಸೂಕ್ತ ರೀತಿಯಲ್ಲಿ ಎಚ್ಚರಿಕೆ ವಹಿಸಿದ್ದೇವೆ ಎಂದರು. ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಮತ್ತು ಕೊಯಮತ್ತೂರಿನಲ್ಲಿ ನಡೆದ ಸ್ಪೋಟ ಪ್ರಕರಣ ನಮ್ಮ ಕಣ್ಣ ಮುಂದೆ ಇರುವುದರಿಂದ ಪೊಲೀಸರು ನಿಗಾ ವಹಿಸಿದ್ದಾರೆ. […]