ಮುಂದಿನ 5 ವರ್ಷದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ : ಆರ್.ಅಶೋಕ್

ಬೆಂಗಳೂರು,ಡಿ.8- ಮುಂದಿನ ಐದು ವರ್ಷದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರ್ಮೂಲನೆಯಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗುಜರಾತ್ ಮತ್ತು ಹಿಮಾಚಲಪ್ರದೇಶದ ವಿಧಾನಸಭಾ ಚುನಾವಣೆ ಫಲಿತಾಂಶ ರಾಜ್ಯದ ಬಿಜೆಪಿ ಮುಖಂಡರು, ಕಾರ್ಯಕರ್ತರಲ್ಲಿ ಹುರುಪು ತಂದಿದೆ. ಈ ಚುನಾವಣೆಯ ಫಲಿತಾಂಶ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದರು. ಗುಜರಾತ್‍ನಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದ್ದು, ಅತಿಹೆಚ್ಚಿನ ಉತ್ಸಾಹ ಮೂಡಿಸಿದ್ದು, ಶಕ್ತಿ ತುಂಬಿದಂತಾಗಿದೆ. ಹೀಗಾಗಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ. ಬಹಳಷ್ಟು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದು ಮುಂದಿನದ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದರು. ಗುಜರಾತ್ ಫಲಿತಾಂಶದಿಂದ ಹಿರಿಹಿರಿ […]