ಹಿಜಾಬ್ ವಿವಾದಕ್ಕೆ ಮತ್ತೆ ಮರುಜೀವ, ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ, ಜು.13- ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂಕೋರ್ಟ್, ಮುಂದಿನ ವಾರ ಸೂಕ್ತ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ. ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆಗೆ ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನೊಳಗೊಂಡ ಪೀಠ ಸಮ್ಮತಿಸಿದೆ. ಶಾಲೆಗಳಲ್ಲಿ ಸಮವಸ್ತ್ರದ ವಿವಾದ ತೀವ್ರವಾಗಿ ಈ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ಭಾರೀ ಚರ್ಚೆ, ಪ್ರತಿಭಟನೆ, ವಾದ ವಿವಾದ ನಡೆದಿದ್ದವು. ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಉಡುಪಿ […]