ಕಳವು ಮಾಡಿದ್ದ ಬೈಕ್‍ನಲ್ಲಿ ನೈಟ್ ರೌಂಡ್ಸ್ : ಮೊಬೈಲ್ ದೋಚುತ್ತಿದ್ದ ಮೂವರ ಬಂಧನ

ಬೆಂಗಳೂರು, ಡಿ. 8- ಕಳವು ಮಾಡಿದ ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಸುತ್ತಾಡಿ ಒಂಟಿಯಾಗಿ ಓಡಾಡುವ ವ್ಯಕ್ತಿಗಳ ಮೊಬೈಲ್ ಫೋನ್‍ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪವನ್‍ಕುಮಾರ್, ಗೌತಮ್ ಮತ್ತು ರಂಗನಾಥ್ ಬಂತ ಆರೋಪಿಗಳು. ಇವರುಗಳಿಂದ 6.5 ಲಕ್ಷ ರೂ. ಮೌಲ್ಯದ 21 ವಿವಿಧ ಕಂಪೆನಿಯ ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮುಂಡಿಪುರದ ನಿವಾಸಿಯೊಬ್ಬರು ತಮ್ಮ ಮನೆಯಿಂದ ಹೊರಬಂದು ಸ್ವಲ್ಪ ದೂರ ನಡೆದುಕೊಂಡು ಹೋಗುತ್ತಿದ್ದಾಗ ಒಂದೇ ಬೈಕ್‍ನಲ್ಲಿ ಬಂದ ಮೂವರು ಇವರನ್ನು ಹಿಂಬಾಲಿಸಿಕೊಂಡು ಹೋಗಿ 20 […]

ಗಾಂಧಿ ಪ್ರತಿಮೆ ಎದುರು ಸಂಸದರ ಅಹೋರಾತ್ರಿ ಧರಣಿ ಮುಂದುವರಿಕೆ

ನವದೆಹಲಿ, ಜು.28- ಅಗತ್ಯ ವಸ್ತುಗಳ ಬೆಲೆ ಏರಿಕೆ, ದಿನ ಬಳಕೆಯ ವಸ್ತುಗಳ ಮೇಲೆ ಜಿಎಸ್‍ಟಿ ಹೇರಿಕೆ ಕುರಿತಂತೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಉಭಯ ಸದನಗಳಲ್ಲಿ ಗದ್ದಲ ಮಾಡಿ ಅಮಾನತುಗೊಂಡಿರುವವರ, ಸಂಸದರು ಸಂಸತ್‍ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಹೋರಾಟ ಇಂದು ಕೂಡ ಮುಂದುವರೆದಿದೆ. ಬುಧುವಾರ ಬೆಳಗ್ಗೆ 11 ಗಂಟೆಯಿಂದ ಆರಂಭಿಸಿರುವ ಅಹೋರಾತ್ರಿ ಧರಣಿ ಹೋರಾಟ ನಾಳೆ ಮಧ್ಯ ರಾತ್ರಿ ಒಂದು ಗಂಟೆಯವರೆಗೂ ಸುಮಾರು 50 ಗಂಟೆಗಳ ಕಾಲ ಮುಂದುವರೆಯಲಿದೆ. ಧರಣಿ ಸತ್ಯಾಗ್ರಹದಲ್ಲಿ […]