ನಿಮ್ಮ ಹತ್ರ ಉತ್ತರ ಇದೆಯಾ..? : ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭಿಯಾನ

ಬೆಂಗಳೂರು, ಆ.29- ಬಿಜೆಪಿ ಸರ್ಕಾರದ ವೈಫಲ್ಯಗಳು, ಸುಳ್ಳುಗಳನ್ನು ಪ್ರಶ್ನಿಸಿ ನಿಮ್ಮ ಬಳಿ ಉತ್ತರ ಇದೆಯಾ ಎಂಬ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. ಇಂದಿನಿಂದ ಬಿಜೆಪಿ ಸರ್ಕಾರಕ್ಕೆ ಪ್ರತಿದಿನ ಒಂದೊಂದು ಪ್ರಶ್ನೆ ಕೇಳಲಾರಂಭಿಸಲಾಗುವುದು. ಬಿಜೆಪಿ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಲಾಗಿತ್ತು. ಅವುಗಳ ಈಡೇರಿಕೆ, ಭ್ರಷ್ಟಾಚಾರ, ಹಗರಣ, ವೈಫಲ್ಯಗಳು ಹಾಗೂ ವಿವಾದಗಳ ಕುರಿತು ಪ್ರಶ್ನೆ ಮಾಡಲು ಕಾಂಗ್ರೆಸ್ ಆರಂಭಿಸಿದೆ. ಕೆಪಿಸಿಸಿಯಲ್ಲಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಪ್ರಚಾರ ಸಮಿತಿ ಅಧ್ಯಕ್ಷ […]