ಹಿಜಾಬ್ ತೆಗೆಯಲು ಶಾಲಾ-ಕಾಲೇಜುಗಳಲ್ಲಿ ಸ್ಥಳಾವಕಾಶ ಕಲ್ಪಿಸುವಂತೆ ಸರ್ಕಾರ ಸೂಚನೆ

ಬೆಂಗಳೂರು,ಫೆ.23- ತರಗತಿಗೆ ಹಾಜರಾಗುವ ಮುನ್ನ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಸ್ಥಳ ಕಲ್ಪಿಸುವಂತೆ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಉಡುಪಿಯಲ್ಲಿ ಶುರುವಾದ ಹಿಜಾಬ್-ಕೇಸರಿ ಶಾಲು ಕಿಡಿ ದೇಶಾದ್ಯಂತ ಹಬ್ಬಿ ಸದ್ಯ ಕೋರ್ಟ್ ಅಂಗಳದಲ್ಲಿ ವಾದ ಮಂಡನೆ ನಡೆಯುತ್ತಿದೆ. ಇತ್ತ ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿ ಪ್ರವೇಶಿಸದಂತೆ ಸರ್ಕಾರ ಸೂಚಿಸಿದೆ. ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ ಸ್ಥಳ ಕಲ್ಪಿಸುವಂತೆ ರಾಜ್ಯದ […]