ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರಲು ಸಮಸ್ಯೆ : ವಿಶ್ವಸಂಸ್ಥೆಯಲ್ಲಿ ಭಾರತ ಕಳವಳ

ವಿಶ್ವಸಂಸ್ಥೆ,ಮಾ.8- ಉಕ್ರೇನ್‍ನ ಸುಮಿಯಲ್ಲಿ ಸಿಲುಕಿರುವ ನಮ್ಮ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಭಾರೀ ಸಮಸ್ಯೆಯಾಗುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧ ಕುರಿತು ವಿಶ್ವಸಂಸ್ಥೆಯ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಎರಡೂ ದೇಶದವರ ಮನವೊಲಿಸಲು ಉತ್ತಮ ಪ್ರಯತ್ನಗಳ ಹೊರತಾಗಿಯೂ ಸುಮಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ರಚಿಸಲಾಗಲಿಲ್ಲ ಎಂದು ಹೇಳಿದ್ದಾರೆ. ಯುದ್ಧದಿಂದ ನಲುಗಿರುವ ಉಕ್ರೇನ್‍ನಲ್ಲಿ ಸಿಲುಕಿರುವ ಅಮಾಯಕ ನಾಗರಿಕರನ್ನು ಸುರಕ್ಷಿತವಾಗಿ ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲು ಭಾರತ ಬಯಸುತ್ತದೆ. ಸುಮಿಯಲ್ಲಿ ಸಿಲುಕಿರುವ […]