ಕೊರೋನಾ ಪರಿಹಾರ ನೀಡದ ರಾಜ್ಯಗಳಿಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ, ಜ.19- ಕೋವಿಡ್-19ನಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ವಿಫಲವಾದ ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಇಂದು ತರಾಟೆಗೆ ತೆಗೆದುಕೊಡಿದೆ. ಈ ಕುರಿತಂತೆ ಆಂಧ್ರಪ್ರದೇಶ ಮುಖ್ಯ ಕಾರ್ಯದರ್ಶಿಗೆ ಕಾರಣ ಕೇಳಿ (ಷೋ ಕಾಸ್) ನೋಟೀಸ್ ನೀಡಿರುವ ಸರ್ವೋನ್ನತ ನ್ಯಾಯಾಲಯವು ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನೇಕೆ ಕೈಗೊಳ್ಳಬಾರದು ಎಂದು ಪ್ರಶ್ನಿಸಿದೆ. ತತ್ಸಂಬಂತ ರಾಜ್ಯಗಳಲ್ಲಿ ಕೋವಿಡ್-19ರ ಸಂತ್ರಸ್ತ ಕುಟುಂಬಗಳಿಗೆ 50,000 ರೂ.ಗಳ ತಾತ್ಕಾಲಿಕ ಪರಿಹಾರ ಧನವನ್ನು ನೀಡದೆ ಕಡಿಮೆ ಮೊತ್ತ ವಿತರಿಸಿರುವುದೇಕೆ ಎಂಬುದನ್ನು ವಿವರಿಸಬೇಕು. ಇದಕ್ಕಾಗಿ ಆಂಧ್ರ ಪ್ರದೇಶ ಮತ್ತು […]