ಖ್ಯಾತ ಸಾಹಿತಿ ಚಂದ್ರಶೇಖರ್ ಪಾಟೀಲ್(ಚಂಪಾ) ಇನ್ನಿಲ್ಲ..!

ಬೆಂಗಳೂರು,ಜ.10-ಬಂಡಾಯ ಸಾಹಿತಿ, ನಾಟಕಕಾರ, ಕನ್ನಡಪರ ಹೋರಾಟಗಾರ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರೊ.ಚಂದ್ರಶೇಖರ್ ಪಾಟೀಲ್(83) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.ಮೃತರು ಒಬ್ಬ ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕಿಟ್ಟು ನಂತರ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು […]