ಕವಿ ನಾಡೋಜ ಡಾ.ಚನ್ನವೀರ ಕಣವಿ ಇನ್ನಿಲ್ಲ
ಹುಬ್ಬಳ್ಳಿ,ಫೆ.16-ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು […]