ನ. 1ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ

ಬೆಂಗಳೂರು,ಅ.30- ಕಾಂಗ್ರೆಸ್‍ನ ಭಾರತ ಐಕ್ಯತಾ ಯಾತ್ರೆ ಆಡಳಿತಾರೂಢ ಬಿಜೆಪಿಯ ಜನ ಸಂಕಲ್ಪ ಯಾತ್ರೆಯ ಬೆನ್ನಲ್ಲೇ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಸಲು ಅಣಿಯಾಗಿದೆ. ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ಯಾತ್ರೆಯನ್ನು ಆರಂಭಿಸಲು ಸಜ್ಜಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದೆ. ನವ […]