ಕಳೆದ ಮೂರು ದಿನಗಳಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ಸೀಕ್ರೆಟ್ ಟ್ರೇನಿಂಗ್

ಬೆಂಗಳೂರು,ನ.7-ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳಿಗೆ ಕಳೆದ ಮೂರು ದಿನಗಳಿಂದ ಜೆಡಿಎಸ್ ನೀಡುತ್ತಿರುವ ಗೌಪ್ಯ ತರಬೇತಿಯು ಗುರುವಾರ ಮುಕ್ತಾಯಗೊಳ್ಳಲಿದೆ. ನಗರದ ಹೊರ ವಲಯದಲ್ಲಿ ಅಭ್ಯರ್ಥಿಗಳಿಗೆ ಚುನಾವಣಾ ಚಾಣಾಕ್ಷರಿಂದ ಚುನಾವಣೆ ಸಿದ್ಧತೆ ಕುರಿತಂತೆ ಜೆಡಿಎಸ್ ವತಿಯಿಂದ ತರಬೇತಿ ನೀಡಲಾಗುತ್ತಿದೆ. ದೆಹಲಿಯ ಒಂದು ತಂಡ ಹಾಗೂ ಬೆಂಗಳೂರಿನ ಎರಡು ತಂಡಗಳು ಪ್ರತಿ ಕ್ಷೇತ್ರದ ಸಂಭವನೀಯ ಅಭ್ಯರ್ಥಿ ಜತೆ ಪ್ರತ್ಯೇಕ ಸಭೆ ನಡೆಸಿ ಚುನಾವಣೆ ಬಗ್ಗೆ ಮಾರ್ಗದರ್ಶನ ಮಾಡುತ್ತಿವೆ. ಅಭ್ಯರ್ಥಿಗಳ ಸಹಾಯಕರನ್ನು ಹೊರಗಿಟ್ಟು ರಹಸ್ಯವಾಗಿ ತರಬೇತಿ ನೀಡಲಾಗುತ್ತಿದೆ. ಯಾರು ತರಬೇತಿ ನೀಡುತ್ತಿದ್ದಾರೆ […]

ನ.1ರಂದು ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಜೆಡಿಎಸ್ ಕರೆ

ಬೆಂಗಳೂರು, ಅ.29- ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದ ಮಾದರಿಯಲ್ಲೇ ಜೆಡಿಎಸ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕರೆ ನೀಡಿದೆ. ರಾಜ್ಯದ ಪ್ರತಿ ಮನೆಯ ಮೇಲೂ ಕನ್ನಡದ ಬಾವುಟ ಹಾರಿಸಲು ಕನ್ನಡಿಗರಲ್ಲಿ ಮನವಿ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮುಂಬರುವ ವಿಧಾನ ಸಭೆ ಚುನಾವಣೆಯ ಪಕ್ಷದ ಸಂಭವನೀಯ ಅಭ್ಯರ್ಥಿಯು ಕನ್ನಡ ಬಾವುಟವನ್ನು ಮನೆಯ ಮೇಲೆ ಹಾರಿಸುವ ಅಭಿಯಾನವನ್ನು […]

ನವೆಂಬರ್‌ನಲ್ಲೂ ಸಾಲು ಸಾಲು ಬ್ಯಾಂಕ್‍ ರಜೆ

ನವದೆಹಲಿ,ಅ.27- ಸರ್ಕಾರಿ ರಜೆ ಋತು ಮುಂದಿನ ನವಂಬರ್ ತಿಂಗಳಲ್ಲೂ ಸಾಗಲಿದ್ದು ಬ್ಯಾಂಕ್‍ಗಳಿಗೆ ಬರೋಬ್ಬರಿ 10 ದಿನ ರಜೆ ಇರಲಿದೆ. ಇದರಿಂದ ಬ್ಯಾಂಕಿಂಗ್ ವ್ಯವಹಾರಗಳಿಗೆ ತುಸು ಅಡಚಣೆಯಾಗುವ ಸಾಧ್ಯತೆ ಇದ್ದು ಹೀಗಾಗಿ ಗ್ರಾಹಕರು ರಜೆಯ ಬಗ್ಗೆ ಮುಂಚಿತವಾಗಿ ತಿಳಿದುಕೊಂಡು ವ್ಯವಹಾರದ ಯೋಜನೆ ರೂಪಿಸಿಕೊಳ್ಳುವುದು ಒಳ್ಳೆಯದು. ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿಗೆ ರೈತರ ಮುತ್ತಿಗೆ 4 ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಯೂ ಸೇರಿದಂತೆ ನ. 1 (ರಾಜ್ಯೋತ್ಸವ ),ನ.8 (ಗುರುನಾನಕ್‍ಜಯಂತಿ), ನ. 11(ಕನಕ ಜಯಂತಿ) ಬ್ಯಾಂಕ್‍ಗಳು […]

ನ.11ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು,ಅ.19- ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದಾರೆ. ಟರ್ಮಿನಲ್ 2 ಅಥವಾ ಟ2 ಅನ್ನು ಎರಡು ಹಂತಗಳಲ್ಲಿ 13,000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 2.54 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿರುವ ಟಿ2ನ ಮೊದಲ ಹಂತವನ್ನು ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳಿಸಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರ್ಷಕ್ಕೆ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. […]

ಶಿಕ್ಷಕರ ನೇಮಕಾತಿಗಾಗಿ ವರ್ಷಕ್ಕೆ 2 ಬಾರಿ ಟಿಇಟಿ ಪರೀಕ್ಷೆ : ಸಚಿವ ನಾಗೇಶ್

ಬೆಂಗಳೂರು,ಆ.8- ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಇದೇ ತಿಂಗಳ ಅಂತ್ಯದೊಳಗೆ ಪ್ರಕಟಿಸುವ ಗುರಿ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದು, ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳ […]

BIG NEWS: ರಾಜ್ಯೋತ್ಸವದಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ, ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು,ಆ.5-ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಕೃತ ಘೋಷಣೆ ಮಾಡಿದರು. ಲಾಲ್‍ಬಾಗ್‍ನಲ್ಲಿಂದು ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ […]