ಬೆಂಗಳೂರಲ್ಲಿ ಪುನಿತ್ ಹೆಸರಿನಲ್ಲಿ 2 ಲಕ್ಷ ಸಸಿ ನೆಡಲು ಮನವಿ

ಬೆಂಗಳೂರು,ಫೆ.5-ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಅವರ ಹೆಸರಿನಲ್ಲಿ ನಗರ ಅರಣ್ಯ ಯೋಜನೆ ಜಾರಿಗೊಳಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಸಿಲಿಕಾನ್ ಸಿಟಿ ಸಂಪೂರ್ಣ ಕಾಂಕ್ರಿಟ್ ನಾಡಾಗಿ ಪರಿವರ್ತನೆಗೊಂಡಿರುವುದನ್ನು ಮನಗಂಡು ನಗರದಲ್ಲಿ ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ ಪುನೀತ್ ರಾಜ್‍ಕುಮಾರ್ ಅವರ ಹೆಸರಿನಲ್ಲಿ ಎರಡು ಲಕ್ಷ ಸಸಿ […]