ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಬದ್ಧನಾಗಿರುವ ನನ್ನ ವಿರುದ್ಧ ಅಪಪ್ರಚಾರ: ಅರಗ ಕಿಡಿ

ಬೆಂಗಳೂರು, ಡಿ.31- ಸದಾ ಅಡಕೆ ಬೆಳೆ ಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನ್ನ ಬಗ್ಗೆ ಆರೋಪ ಮಾಡಲು ಬೇರೆ ಏನೂ ಇಲ್ಲದ ಕಾರಣ ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ, ರೈತರ ಹಿತ ರಕ್ಷಣೆ ಬಗ್ಗೆ ಸದನದಲ್ಲಿ ಮಾತನಾಡಿದ್ದನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. […]