ಮಹಿಳೆಯರ ರಕ್ಷಣೆಗೆ ‘ಓಬವ್ವ ಆತ್ಮರಕ್ಷಣಾ ಯೋಜನೆ’
ಬೆಂಗಳೂರು, ಫೆ.5- ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆಗಾಗಿ ಕರಾಟೆ ತರಬೇತಿ ನೀಡುವ ಓಬವ್ವ ಆತ್ಮರಕ್ಷಣಾ ಕಲೆಯನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ, ಕಿರುಕುಳದಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳುವ ನಿಟ್ಟಿನಲ್ಲಿ ಓಬವ್ವ ಆತ್ಮರಕ್ಷಣಾ ಕಲೆ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ […]